ನವದೆಹಲಿ : ಸಮುದಾಯಗಳ ನಡುವೆ ದ್ವೇಷ ಹರಡಲು ನಕಲಿ ಸುದ್ದಿ ಪ್ರಸಾರ ಮಾಡುತ್ತಿದ್ದ 10 ಚಾನಲ್ಗಳ 45 ಯುಟ್ಯೂಬ್ ವೀಡಿಯೋ ಗಳನ್ನ ಕೇಂದ್ರ ಸರ್ಕಾರ ನಿಷೇಧಿಸಿದೆ. ಉದಾಹರಣೆಗೆ ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಸರ್ಕಾರ ಕಸಿದುಕೊಳ್ಳುವುದು,
ಸಮುದಾಯದ ವಿರುದ್ಧ ಹಿಂಸಾತ್ಮಕ ಬೆದರಿಕೆ ಹಾಕುವುದು ಅಥವಾ ದೇಶದಲ್ಲಿ ಅಂತರ್ಯುದ್ಧ ಘೋಷಣೆಯಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ ವೀಡಿಯೋಗಳನ್ನ ನಿರ್ಬಂಧಿಸುವಂತೆ ಆದೇಶಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಇಂದು ಆದೇಶಿಸಿದ್ದಾರೆ.
10 ಚಾನೆಲ್ಗಳಲ್ಲಿ ಪ್ರಸಾರವಾಗಿದ್ದ ಈ 45 ವೀಡಿಯೋಗಳು ಸಮಯದಾಯಗಳ ನಡುವೆ ದ್ವೇಷ ಹುಟ್ಟಿಸುವಂತವಾಗಿದ್ದವು, ತಪ್ಪು ಕಲ್ಪನೆಯನ್ನು ಹೊಂದಿದ್ದವು. ಒಟ್ಟಾರೆ 1.30 ಕೋಟಿಗೂ ಅಧಿಕ ಮಂದಿ ಈ ವೀಡಿಯೋಗಳನ್ನ ವೀಕ್ಷಿಸಿದ್ದರು.
ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಗೌರವಿಸುವ ಉದ್ದೇಶದಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ.