ಬೆಂಗಳೂರು :ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರು ಸೋಮವಾರ (ಇಂದು) ಬೆಳಗ್ಗೆ ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಹಿಂದೆ ಅವರು ಕ್ಯಾನ್ಸರ‍್ ಸಂಬಂಧಿ ಖಾಯಿಲೆಗಾಗಿ ವಿದೇಶದಿಂದ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಕೆಲವು ದಿವಸಗಳಿಂದ ತೀವ್ರ ಅನಾರೋಗ್ಯದ ಕಾರಣದಿಂದಾಗಿ ಅವರು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ ಆಸ್ಪತ್ರೆಯಲ್ಲೆ ಕೊನೆಯುಸಿರೆಳೆದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.