ಭಾರತದ 50ನೇ ಸಿಜೆಐ ಆಗಿ ಚಂದ್ರಚೂಡ್ ನೇಮಕ

ಮಂಗಳವಾರ, 18 ಅಕ್ಟೋಬರ್ 2022 (08:25 IST)
ನವದೆಹಲಿ : ಭಾರತದ ಸುಪ್ರೀಂ ಕೋರ್ಟ್ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿ.ವೈ ಚಂದ್ರಚೂಡ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅವರು 2 ವರ್ಷ ಅಧಿಕಾರದಲ್ಲಿ ಇರಲಿದ್ದು, 2024ರ ನವೆಂಬರ್ 10ರಂದು ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ.

ಸಂವಿಧಾನದ 124ನೇ ವಿಧಿಯ ಕಲಂ (2)ರ ಅಡಿ ಅಧಿಕಾರ ಚಲಾಯಿಸಿ ನ್ಯಾಯಮೂರ್ತಿ ಡಾ. ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ಸಿಜೆಐ ಆಗಿ 2022ರ ನವೆಂಬರ್ 9ರಿಂದ ಅನ್ವಯವಾಗುವಂತೆ ರಾಷ್ಟ್ರಪತಿ ಅವರು ಆದೇಶ ಮಾಡಿದ್ದಾರೆ ಎಂದು ಕಾನೂನು ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ