ಈ ಬಾರಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೀನಾಯವಾಗಿ ಸೋಲಲಿದ್ದಾರೆ - ವಿಪಕ್ಷ ನಾಯಕ ಜಗದೀಶ್ ಶೆಟ್ಟರ್
ಮಂಗಳವಾರ, 10 ಏಪ್ರಿಲ್ 2018 (06:38 IST)
ಹುಬ್ಬಳ್ಳಿ : ಈ ಬಾರಿ ಚುನಾವಣೆಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೀನಾಯವಾಗಿ ಸೋಲಲಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ' ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಲಿನ ಭಯ ಕಾಡುತ್ತಿದೆ. ಎಲ್ಲಿಯೂ ಅವರಿಗೆ ಗೆಲ್ಲುವ ಭರವಸೆ ಮೂಡುತ್ತಿಲ್ಲ. ಚಾಮುಂಡೇಶ್ವರಿ, ವರುಣ ಬಾದಾಮಿ, ಗಂಗಾವತಿ ಹೀಗೆ ಕ್ಷೇತ್ರ ಹುಡುಕಿಕೊಂಡು ಓಡಾಡುತ್ತಿದ್ದಾರೆ. ಸೋಲಿನ ಭೀತಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕ್ಷೇತ್ರದಿಂದ ಕ್ಷೇತ್ರಕ್ಕೆ ಹಾರುವ ಲೆಕ್ಕಾಚಾರ ಹಾಕುತ್ತಿದ್ದಾರೆ. ಅವರು ಈ ಬಾರಿ ಹೀನಾಯವಾಗಿ ಸೋಲಲಿದ್ದಾರೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ