ನವದೆಹಲಿ : ಮಕ್ಕಳ ಲಸಿಕೆ ನೀಡುವ ವಿಚಾರದಲ್ಲಿ ಪ್ರಧಾನಿ ಮೋದಿ ಸರ್ಕಾರ ಎಚ್ಚರಿಕೆಯ ನಡೆಯನ್ನು ಇಟ್ಟಿದೆ.
ಇಂದು ರಾತ್ರಿ 12 ರಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ 15 ರಿಂದ 18 ವರ್ಷದ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಮುಂದಾಗಿದೆ.
ದೇಶದಲ್ಲಿ ಓಮಿಕ್ರಾನ್ ಸೊಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಮೂರನೇ ಅಲೆ ಬರುವ ಸಾಧ್ಯತೆ ದಟ್ಟವಾಗಿದೆ. ಈ ಹಿಂದೆ ತಜ್ಞರು ಮೂರನೇ ಅಲೆ ಮಕ್ಕಳಿಗೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ತಿಳಿಸಿದ್ದರು. ಇದೀಗ ಮೂರನೇ ಅಲೆ ಪ್ರಾರಂಭದ ಹಂತದಲ್ಲೇ ಮಕ್ಕಳಿಗೆ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿ ಸಿಹಿ ಸುದ್ದಿ ತಿಳಿಸಿತ್ತು.
ಡಿಸಿಜಿಐ ಲಸಿಕೆಗೆ ಅನುಮತಿ ನೀಡುತ್ತಿದ್ದಂತೆ ಇತ್ತ ದೇಶವನ್ನು ಉದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, 15 ರಿಂದ 18 ವರ್ಷದ ಮಕ್ಕಳಿಗೆ ಮಾತ್ರ ವ್ಯಾಕ್ಸಿನ್ ನೀಡಲು ಮುಂದಾಗಿದೆ. ಈ ಮೂಲಕ ಈ ಹಂತದಲ್ಲಿ ವಿತರಣೆ ವೇಳೆ ಯಾವುದೇ ಸಮಸ್ಯೆ ಆಗದಿರಲು ಈ ನಿರ್ಧಾರವನ್ನು ಕೈಗೊಳ್ಳಲಾಗಿರಬಹುದು ಎಂದು ವರದಿಯಾಗುತ್ತಿದೆ.
ಮಕ್ಕಳ ಲಸಿಕೆಯ ಜೊತೆಗೆ ಕೊಮೊರ್ಬಿಡಿಟಿ ಹೊಂದಿರುವವರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ತಮ್ಮ ವೈದ್ಯರ ಶಿಫಾರಸಿನ ಮೇರೆಗೆ 2022ರ ಜನವರಿ 10 ರಿಂದ ಬೂಸ್ಟರ್ ಡೋಸ್ಗಳಿಗೆ ಅರ್ಹರಾಗಿರುತ್ತಾರೆ. ಕೋವಿಡ್ನ ಹೊಸ ಓಮಿಕ್ರಾನ್ ರೂಪಾಂತರದಿಂದಾಗಿ ವಿಶ್ವದ ಅನೇಕ ದೇಶಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.