ಚಿಲುಮೆ ಅಕ್ರಮ : ಅಮಾನತು ಕ್ರಮ ಹಿಂಪಡೆದ ಸರ್ಕಾರ
ಪ್ರಕರಣದಲ್ಲಿ ಐಎಎಸ್ ಅಧಿಕಾರಿಗಳಾದ ಶ್ರೀನಿವಾಸ್ ಮತ್ತು ರಂಗಪ್ಪ ಅವರ ಹೆಸರು ಕೇಳಿಬಂದಿತ್ತು. ಇಬ್ಬರ ವಿಚಾರಣೆಗೆ ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಆಗ ಸರ್ಕಾರ ಸೇವೆಯಿಂದ ಅಮಾನತು ಮಾಡಿತ್ತು.
ಬಳಿಕ ಸರ್ಕಾರದ ಕ್ರಮವನ್ನು ಇಬ್ಬರೂ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಿದ್ದರು. ಇದೀಗ ನ್ಯಾಯಾಲಯ ಇಬ್ಬರಿಗೂ ಜಾಮೀನು ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನು ಸೇವೆಗೆ ಹೊಸ ಸ್ಥಾನಗಳಿಗೆ ನಿಯೋಜನೆ ಮಾಡಿದೆ.