ಸರ್ಕಾರಿ ಮತ್ತು ಅನುದಾನಿತ ಶಾಲಾ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಪ್ಯಾಡ್ ವಿತರಿಸುವ ಶುಚಿ ಯೋಜನೆಯನ್ನೂ ಅಕ್ಟೋಬರ್ ತಿಂಗಳಲ್ಲಿ ಚಾಲನೆಗೆ ತರುತ್ತಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.
ಕಳೆದ 3 ವರ್ಷಗಳಿಂದ ಶುಚಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದ ಬಳಿಕ ಶುಚಿ ಯೋಜನೆಗೆ ಮರು ಚಾಲನೆ ನೀಡಲು ನಿರ್ಧರಿಸಿದೆ.
ಪ್ರಸಕ್ತ ಸಾಲಿಗೆ 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ಪ್ಯಾಡ್ ವಿತರಿಸಲು ಅಧಿಕಾರಿಗಳಿಗೆ ಅಧಿಕಾರಕ್ಕೆ ಬಂದ ಆರಂಭದಲ್ಲೇ ನಾನು ಸೂಚಿಸಿದ್ದೆ. 40.50 ಕೋಟಿ ರೂ. ವೆಚ್ಚದಲ್ಲಿ 15 ಕೋಟಿಗೂ ಹೆಚ್ಚು ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ಔಷಧಿ ಸರಬರಾಜು ಕಾರ್ಪೋರೇಷನ್ ಮೂಲಕ ಖರೀದಿಸಿ ಹೆಣ್ಣು ಮಕ್ಕಳಿಗೆ ವಿತರಿಸಲು ಯೋಜಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.