ಮುಲಾಜಿಲ್ಲದೆ ರಾಜಕಾಲುವೆ ತೆರವು : ಬೊಮ್ಮಾಯಿ

ಬುಧವಾರ, 14 ಸೆಪ್ಟಂಬರ್ 2022 (06:33 IST)
ಬೆಂಗಳೂರು : ಯಾವುದೇ ಮುಲಾಜಿಲ್ಲದೆ ಬೆಂಗಳೂರಿನ ರಾಜಕಾಲುವೆ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
 
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕೃಷ್ಣ ಭೈರೇಗೌಡ ಪ್ರಸ್ತಾಪಕ್ಕೆ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಮಳೆಯಿಂದ ಬೆಂಗಳೂರಿಗೆ ಆಗುವ ಅನಾಹುತ ತಪ್ಪಿಸಲು ರಾಜಕಾಲುವೆಗಳ ಸಮಗ್ರ ಅಭಿವೃದ್ಧಿ ಕೈಗೊಳ್ಳಲಾಗುತ್ತಿದ್ದು,

ಕೆರೆಗಳಿಗೆ ಸ್ಟ್ಲೂಯೀಸ್ ಗೇಟ್ಗಳನ್ನು ಅಳವಡಿಸಲು ಆದೇಶಿಸಿದ್ದೇವೆ ಎಂದು ಹೇಳಿದರು. ರಾಜಕಾಲುವೆಗಳ ಮಾಸ್ಟರ್ ಪ್ಲಾನ್ನ್ನು ಮತ್ತೆ ಪರಿಷ್ಕರಿಸುತ್ತೇವೆ. ಕಾಲಮಿತಿಯೊಳಗೆ 1,800 ಕೋಟಿ ರೂ. ವೆಚ್ಚದಲ್ಲಿ ರಾಜ ಕಾಲುವೆ ಅಭಿವೃದ್ಧಿಪಡಿಸುತ್ತೇವೆ ಎಂದರು.

ಬೆಂಗಳೂರು ನಗರದಲ್ಲಿ 859 ಕಿ.ಮೀ ರಾಜಕಾಲುವೆ ಇದೆ. ಈ ಪೈಕಿ 450 ಕಿ.ಮೀ ಅಭಿವೃದ್ಧಿಗೆ ಬಾಕಿಯಿದ್ದು, ಕಳೆದ ಬಾರಿ 1,500 ಕೋಟಿ ನೀಡಿದ್ದು, ಈ ಬಾರಿ ಮತ್ತೆ ಹೆಚ್ಚುವರಿಯಾಗಿ 300 ಕೋಟಿ ರೂ. ನೀಡುತ್ತೇವೆ. ಎರಡು ವರ್ಷದಲ್ಲಿ ನಾವು ಈ ಕಾಮಗಾರಿ ಮುಕ್ತಾಯಗೊಳಿಸುತ್ತೇವೆ ಎಂದು ವಿಧಾನಸಭೆಗೆ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ