ಬೆಳಗಾವಿ : ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿ, ಪ್ರಶಸ್ತಿ ಮೊತ್ತದ ಆದೇಶವನ್ನು ಪ್ರಕಟಿಸಿದರು.
ಪರಮವೀರಚಕ್ರ ಪಡೆದವರಿಗೆ 25 ಲಕ್ಷ ರೂ.ದಿಂದ 1.5 ಕೋಟಿ ರೂ.ಗಳು, ಮಹಾವೀರಚಕ್ರ ವಿಜೇತರಿಗೆ 12 ಲಕ್ಷ ರೂ.ಗೆ ಬದಲಾಗಿ 1 ಕೋಟಿ ರೂ.ಗಳು, ಅಶೋಕ ಚಕ್ರ ಪಡೆದವರಿಗೆ 25 ಲಕ್ಷ ರೂ.ಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1 ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು,
ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ, ನೌಕಾ, ವಾಯು ಸೇನಾ ಮೆಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್ಶನ್ ಎನ್.ಡಿ.ಎಸ್ ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳನ್ನು ಹೆಚ್ಚಿಸಲು ಆದೇಶವನ್ನು ಹೊರಡಿಸಲಾಗಿದೆ ಎಂದು ವಿವರಿಸಿದರು.