ನಟ ಅಂಬರೀಶ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಎಚ್.ಡಿ.ಕುಮಾರಸ್ವಾಮಿ

ಭಾನುವಾರ, 25 ನವೆಂಬರ್ 2018 (07:01 IST)
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್ ನಿಧನದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, 'ಎಲ್ಲರ ಪ್ರೀತಿ ಪಾತ್ರಕ್ಕೆ ಒಳಗಾದ.. ನನಗೆ ಅತ್ಯಂತ ಆತ್ಮೀಯರಾಗಿದ್ದ.. ಚಿತ್ರರಂಗದ ದಿಗ್ಗಜ ಅಂಬರೀಶ್ ನಿಧನರಾಗಿದ್ದಾರೆ. ಇವತ್ತು ನನ್ನ ಪಾಲಿಗೆ ಅತ್ಯಂತ ಕೆಟ್ಟ ದಿನ. ಅಭಿಮಾನಿಗಳ ನೋವು ನನಗೆ ಅರ್ಥ ಆಗುತ್ತದೆ. ನಾಳೆ ಬೆಳಗ್ಗೆ 7.30-8 ಗಂಟೆ ಹೊತ್ತಿಗೆ ಕಂಠೀರವ ಸ್ಟೇಡಿಯಮ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅಭಿಮಾನಿಗಳು ಶಾಂತ ರೀತಿಯಲ್ಲಿ ವರ್ತಿಸಿ ಸಹಕರಿಸಬೇಕು.

ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ಆಗುವ ಕಾರಣ ಅನಾನುಕೂಲ ಆಗಬಾರದು ಎಂದು ಮಂಡ್ಯದಿಂದ ಅಭಿಮಾನಿಗಳು ಬರಲು ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ' ಎಂದು ಹೇಳಿದ್ದಾರೆ.


'ಅಂಬರೀಶ್ ಹೆಸರಿನಲ್ಲಿ ವಿಶೇಷ ಸ್ಮಾರಕ ಬೆಂಗಳೂರಿನ ಸ್ಥಾಪನೆ ಮಾಡುತ್ತೇವೆ. ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂಬರೀಶ್ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆ ಮಾಡುವಾಗ ಎಲ್ಲರ ಸಹಕಾರ ಅಗತ್ಯ. ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಪ್ರಾರ್ಥಿಸೋಣ' ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ