ಬಿಜೆಪಿ ವಿರುದ್ಧ ದಂಗೆ ಏಳಿ ಎಂದು ಕರೆ ನೀಡಿ ತೊಂದರೆಗೆ ಸಿಲುಕಿದ ಸಿಎಂ ಎಚ್ ಡಿಕೆಗೆ ದೇವೇಗೌಡರ ಅಭಯ
ಬಿಜೆಪಿ ಆಪರೇಷನ್ ಕಮಲದ ಭೀತಿ ಹಿನ್ನಲೆಯಲ್ಲಿ ದೇವೇಗೌಡರ ಜತೆಗೆ ಚರ್ಚೆ ನಡೆಸಿರುವ ಕುಮಾರಸ್ವಾಮಿಗೆ, ಯಾವುದೇ ತಕರಾರು ಇಲ್ಲದೇ ಸರ್ಕಾರ ನಡೆಸು. ಬೇರೆ ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡ ಎಂದು ದೊಡ್ಡ ಗೌಡರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸುತ್ತಿರುವ ದೇವೇಗೌಡರು ಮನೆಯಲ್ಲಿಯೇ ಕುಳಿತು ತಂತ್ರಗಾರಿಕೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಜೆಡಿಎಸ್ ನಾಯಕರ ಜತೆಗೆ ಒಂದು ಸುತ್ತಿನ ಸಭೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ.