ಖಾತೆಗಾಗಿ ಯಾರೂ ಫೈಟ್ ಮಾಡ್ತಿಲ್ಲ: ಸಿಎಂ ಕುಮಾರಸ್ವಾಮಿ

ಭಾನುವಾರ, 27 ಮೇ 2018 (12:25 IST)
ಬೆಂಗಳೂರು: ರಾಜ್ಯ ಸಚಿವ ಸಂಪುಟ  ವಿಸ್ತರಣೆ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಪೈಪೋಟಿ ಶುರುವಾಗಿದೆ ಎಂಬ ವರದಿಗಳ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ‘ಪ್ರಮುಖ ಖಾತೆಗಳಿಗಾಗಿ ಆಕಾಂಕ್ಷಿಗಳು ಆಗ್ರಹಿವುದು ಸಹಜ. ಆದರೆ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ಖಾತೆಗಾಗಿ ಯಾರೂ ಫೈಟ್ ಮಾಡ್ತಾ ಇಲ್ಲ’ ಎಂದಿದ್ದಾರೆ.

ಅತ್ತ ಕಾಂಗ್ರೆಸ್ ನಲ್ಲೂ ಪ್ರಮುಖ ಖಾತೆಗಳಿಗಾಗಿ ಹಲವು ಆಕಾಂಕ್ಷಿಗಳು ಅರ್ಜಿ ಹಾಕಿದ್ದಾರೆ. ಇತ್ತ ಜೆಡಿಎಸ್ ನಲ್ಲೂ ಆಕಾಂಕ್ಷಿ ನಾಯಕರು ಬಹಿರಂಗವಾಗಿಯೇ ಹೇಳಿಕೆ ಕೊಡುತ್ತಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ