ಸಿದ್ದರಾಮಯ್ಯ ಲೋಕಸಭೆಗೆ ಮೈತ್ರಿ ಮಾತನಾಡುತ್ತಿದ್ದರೆ ಕುಮಾರಸ್ವಾಮಿ ಲೆಕ್ಕಾಚಾರವೇ ಬೇರೆ!
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಎಂ ಕುಮಾರಸ್ವಾಮಿ ‘ನೋಡೋಣ ಅವರು ಜೆಡಿಎಸ್ ನ್ನು ಯಾವ ರೀತಿ ನೋಡಿಕೊಳ್ಳುತ್ತಾರೆ ಅಂತ’ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ.
‘ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಳ್ಳುವ ಆಲೋಚನೆ ಇದೆ. ಆದರೆ ಅದರ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಅವರು ಹೇಗೆ ಜೆಡಿಎಸ್ ನ್ನು ಟ್ರೀಟ್ ಮಾಡುತ್ತಾರೆಂದು’ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.