ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ ಸಿಎಂ ಎಚ್ ಡಿಕೆ

ಭಾನುವಾರ, 1 ಜುಲೈ 2018 (09:00 IST)
ಬೆಂಗಳೂರು: ಸುಪ್ರೀಂ ಕೋರ್ಟ್ ಅಣತಿಯಂತೆ ಕಾವೇರಿ ನದಿ ನಿರ್ವಹಣಾ ಮಂಡಳಿ ಸ್ಥಾಪನೆ ಮಾಡಲು ಕೇಂದ್ರ ಹೊರಟಿರುವ ಬೆನ್ನಲ್ಲೇ ಇದರ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಅದರಲ್ಲಿರುವ ಕೆಲವು ಅಂಶಗಳ ಬಗ್ಗೆ ನಮ್ಮ ವಿರೋಧವಿದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಇದೇ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಕಳೆದ ವಾರ ಸಿಎಂ ಕುಮಾರಸ್ವಾಮಿ, ಕರ್ನಾಟಕದ ಜತೆಗೆ ಸಮಾಲೋಚನೆ ನಡೆಸದೇ ಕಾವೇರಿ ನಿರ್ವಹಣಾ ಮಂಡಳಿ ರೂಪು ರೇಷೆಗಳ ಬಗ್ಗೆ ಕೇಂದ್ರ ಏಕಮುಖ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದ್ದರು.

ಇದರಲ್ಲಿ ರಾಜ್ಯದ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗುತ್ತದೆ. ಅದೇ ಕಾರಣಕ್ಕೆ ಸುಪ್ರೀಂಕೋರ್ಟ್ ನಲ್ಲಿ ಆಕ್ಷೇಪ ಸಲ್ಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ