ಬೆಂಗಳೂರು: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನಲೆಯಲ್ಲಿ ಚುನಾವಣೆಗೆ ಸಜ್ಜಾಗಲು ಬಿಜೆಪಿ-ಕಾಂಗ್ರೆಸ್ ಯೋಜನೆ ರೂಪಿಸಿದೆ.
ಕಾಂಗ್ರೆಸ್ ಈ ಬಾರಿ ಸಿದ್ದರಾಮಯ್ಯನವರನ್ನು ಮೈಸೂರಿನಿಂದ ಕಣಕ್ಕಿಳಿಸಿ ಲೋಕಸಭೆಗೆ ಕಳುಹಿಸಲು ಚಿಂತನೆ ನಡೆಸಿದೆ. ಆದರೆ ಸಿದ್ದರಾಮಯ್ಯ ಇದುವರೆಗೆ ಇದಕ್ಕೆ ಹಸಿರು ನಿಶಾನೆ ತೋರಿಲ್ಲ. ಸಿದ್ದರಾಮಯ್ಯರನ್ನು ಮೈಸೂರಿನಿಂದ ಕಣಕ್ಕಿಳಿಸಿದರೆ ಪ್ರಮುಖ ಕ್ಷೇತ್ರವೊಂದನ್ನು ತನ್ನಲ್ಲೇ ಉಳಿಸಿಕೊಳ್ಳಬಹುದೆಂದು ಕಾಂಗ್ರೆಸ್ ಲೆಕ್ಕಾಚಾರ ಹಾಕಿದೆ.
ಇತ್ತ ಬಿಜೆಪಿ ರಾಜ್ಯಾದ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಥಳೀಯ ನಾಯಕರ ವಿಶ್ವಾಸ ತೆಗೆದುಕೊಳ‍್ಳಲು ಮೂರು ತಂಡಗಳಾಗಿ ರಾಜ್ಯ ಪ್ರವಾಸ ಮಾಡಲು ನಿರ್ಧರಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು, ಜಿಲ್ಲಾ ಪಂಚಾಯತ್ ಮಟ್ಟದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಳಮಟ್ಟದಿಂದಲೇ ಪಕ್ಷ ಸಬಲಗೊಳಿಸುವ ಕೆಲಸಕ್ಕೆ ಕೈ ಹಾಕಲಿದ್ದಾರೆ. ಈ ಬಗ್ಗೆ ಇತ್ತೀಚೆಗೆ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನವಾಗಿತ್ತು. ಅಂತೂ ಎರಡೂ ಪಕ್ಷಗಳೂ ಲೋಕಸಭೆ ಚುನಾವಣೆಗೆ ಭರ್ಜರಿ ಯೋಜನೆಯನ್ನೇ ರೂಪಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.