ಮೈತ್ರಿ ಸರ್ಕಾರದಲ್ಲಿ ಸಿಂಹಪಾಲು ಕಾಂಗ್ರೆಸ್ ನದ್ದೇ!

ಬುಧವಾರ, 23 ಮೇ 2018 (10:13 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಅದರ ಬದಲಿಗೆ ಸಚಿವ ಸಂಪುಟದಲ್ಲಿ ಸಿಂಹಪಾಲನ್ನೇ ಪಡೆದಿದೆ.

ಒಟ್ಟು ಸಿಎಂ ಸ್ಥಾನದ ಸಹಿತ 12 ಸ್ಥಾನಗಳಷ್ಟೇ ಜೆಡಿಎಸ್ ಪಾಲಿಗಿದೆ. ಸ್ಪೀಕರ್, ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ಇತರ 22 ಸ್ಥಾನಗಳು ಕಾಂಗ್ರೆಸ್ ಪಾಲಾಗಿದೆ. ಅಲ್ಲಿಗೆ ಸಮ್ಮಿಶ್ರ ಸರ್ಕಾರದಲ್ಲಿ ಬಹುಪಾಲು ಕಾಂಗ್ರೆಸ್ ಪಡೆದಿದೆ.

ಈಗಾಗಲೇ ಸ್ಪೀಕರ್ ಸ್ಥಾನ ಪಡೆದಿರುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷರಾಗಿ ಹಿರಿಯ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಉಪ ಮುಖ್ಯಮಂತ್ರಿಯಾಗಿ ಜಿ ಪರಮೇಶ್ವರ್ ಜತೆಗೆ ಇನ್ನೊಬ್ಬರೂ ಕಾಂಗ್ರೆಸ್ ಶಾಸಕರೇ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಹೆಸರು ಮತ್ತೊಂದು ಉಪ ಮುಖ್ಯಮಂತ್ರಿ ಹುದ್ದೆಗೆ ಬಲವಾಗಿ ಕೇಳಿಬರುತ್ತಿದೆ.

ಆದರೆ ಯಾರನ್ನೆಲ್ಲಾ ಸಚಿವರಾಗಿ ಮಾಡಬೇಕೆಂದು ಇನ್ನೂ ತೀರ್ಮಾನವಾಗಿಲ್ಲ. ವಿಶ್ವಾಸ ಮತ ಸಾಬೀತಾದ ಬಳಿಕ ಈ ಕಾರ್ಯಗಳನ್ನು ಎರಡೂ ಪಕ್ಷಗಳ ನಾಯಕರು ಸಭೆ ನಡೆಸಿ ತೀರ್ಮಾನಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ