ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎನ್ನುತ್ತಿದ್ದ ಕಾಂಗ್ರೆಸ್ ವರಸೆ ಬದಲು

ಬುಧವಾರ, 25 ಜುಲೈ 2018 (09:00 IST)
ನವದೆಹಲಿ: ಮೊನ್ನೆಯಷ್ಟೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ರಾಹುಲ್ ಗಾಂಧಿಯನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದ್ದ ಕಾಂಗ್ರೆಸ್ ಇದೀಗ ವರಸೆ ಬದಲಿಸಿದೆ.

ರಾಹುಲ್ ಪ್ರಧಾನಿ ಅಭ್ಯರ್ಥಿಯಾದರೆ ಬಿಎಸ್ ಪಿ, ತೃಣಮೂಲ ಕಾಂಗ್ರೆಸ್ ಬೆಂಬಲ ಕಷ್ಟ ಎಂದು ಅರಿತ ಕಾಂಗ್ರೆಸ್ ಇದೀಗ ಆರ್ ಎಸ್ ಎಸ್ ಮತ್ತು ಬಿಜೆಪಿ ಸೋಲಿಸುವ ಸಾಮರ್ಥ್ಯವಿರುವ ಯಾರಿಗೇ ಆದರೂ ತನ್ನ ಬೆಂಬಲವಿದೆ ಎಂದು ಹೇಳಿಕೊಂಡಿದೆ.

ಸ್ವತಃ ರಾಹುಲ್ ಗಾಂಧಿ ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ಮಹಿಳಾ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗೆ ರಾಹುಲ್ ಈ ರೀತಿ ಉತ್ತರಿಸಿದ್ದಾರೆ. ಅಷ್ಟೇ ಅಲ್ಲದೆ, ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಅತೀ ಹೆಚ್ಚು ಸೀಟು ಗೆಲ್ಲುವುದು ನಮ್ಮ ಗುರಿ ಎಂದಿದ್ದಾರೆ. ಈ ಎರಡು ರಾಜ್ಯಗಳಲ್ಲಿ ಮಿತ್ರ ಪಕ್ಷಗಳೊಂದಿಗೆ ಸಖ್ಯ ಬೆಳೆಸಲು ಸಿದ್ಧರಾಗಿರುವುದಾಗಿ ಅವರು ಹೇಳಿದ್ದಾರೆ. ಈ ಎರಡು ರಾಜ್ಯಗಳು ಅತೀ ಹೆಚ್ಚು ಲೋಕಸಭೆ ಸ್ಥಾನಗಳನ್ನು ಹೊಂದಿವೆ.

ಹೀಗಾಗಿ ಇದೀಗ ಪ್ರಧಾನಿ ಹುದ್ದೆ ರೇಸ್ ನಲ್ಲಿ ಮಾಯಾವತಿ ಮತ್ತು ಮಮತಾ ಬ್ಯಾನರ್ಜಿ ಹೆಸರುಗಳು ಮುಂಚೂಣಿಗೆ ಬಂದಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ