ಮಹಾ ಮೈತ್ರಿಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಮೀಟಿಂಗ್
ಈ ಸಭೆಯಲ್ಲಿ ರಾಜ್ಯದಿಂದ ಸಿದ್ದರಾಮಯ್ಯ, ಕೆ ಸಿ ವೇಣುಗೋಪಾಲ್, ದಿನೇಶ್ ಗುಂಡೂರಾವ್ ಭಾಗವಹಿಸಲಿದ್ದಾರೆ. ಇನ್ನು, ದೇಶದ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ನಾಯಕರೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಯಾವ ಪಕ್ಷಗಳ ಜತೆ ಮೈತ್ರಿ ನಡೆಸಬೇಕು ಎಂಬುದು ಈ ಸಭೆಯಲ್ಲಿ ಚರ್ಚೆಯಾಗಲಿದೆ. ಈ ನಡುವೆ ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ರಾಹುಲ್ ಗೆ ಇದೇ ಸಂದರ್ಭದಲ್ಲಿ ವಿವರಣೆ ನೀಡಲಿದ್ದಾರೆ. ಅಲ್ಲದೆ, ಸಚಿವ ಸಂಪುಟ ವಿಸ್ತರಣೆ ಕುರಿತೂ ಚರ್ಚೆ ನಡೆಸಲಿದ್ದಾರೆ.