ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧಾರ

ಶುಕ್ರವಾರ, 18 ಮೇ 2018 (09:18 IST)
ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ.
 

ಈ ಬಗ್ಗೆ ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಿಯೋಗವೊಂದು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿ ಮಾಡಲು ನಿರ್ಧರಿಸಿದೆ. ಇದಕ್ಕಾಗಿ ಈಗಾಗಲೇ ರಾಷ್ಟ್ರಪತಿಗಳ ಸಮಯಾವಕಾಶವನ್ನು ಕೋರಿದೆ.

ಬಹುಮತವಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಮಾಡುವುದಾಗಿ ಅವಕಾಶ ಕೋರಿದರೂ ಬಹುದೊಡ್ಡ ಪಕ್ಷ ಬಿಜೆಪಿಗೆ ಅವಕಾಶ ಕೊಟ್ಟಿರುವುದಕ್ಕೆ ಕಾಂಗ್ರೆಸ್ ರಾಷ್ಟ್ರಪತಿಗೆ ದೂರು ನೀಡಲು ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ