ಬೆಂಗಳೂರು : ಮಹಾಮಾರಿ ಕೊರೊನಾದಿಂದಾಗಿ ಶಾಲೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈಗ ಮತ್ತೆ ಹಿಜಾಬ್ ವಿವಾದದಿಂದಾಗಿ ಶಾಲೆಗಳಿಂದ ದೂರ ಉಳಿಯುವಂತಾಗಿದೆ.
ಸದ್ಯ ಸರ್ಕಾರ ಇಂದಿನಿಂದ ಮತ್ತೆ ಶಾಲೆಗಳನ್ನು ತೆರೆಯಲು ಅವಕಾಶ ನೀಡದೆ. ಇಂತಹ ಸಮಯದಲ್ಲೇ ಸಮವಸ್ತ್ರ ಸಮರ ಕುರಿತು ಇವತ್ತು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ಭಾರಿ ಕುತೂಹಲ ಕರಳಿಸಿದೆ.
ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಹಕ್ಕಿನ ವಿವಾದ ಮುಗಿಯುವ ಹಂತಕ್ಕೆ ಬಂದಿದೆ. ಇವತ್ತು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ.
ಅದು ಕೂಡ 6 ರಿಟ್ ಅರ್ಜಿ, ಕೆಲ ಮಧ್ಯಂತರ ಅರ್ಜಿಗಳ ವಿಚಾರಣೆ ಆಗಲಿದೆ. ಇವತ್ತು ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡೋ ಸಾಧ್ಯತೆ ಇದೆ. ಅದು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಹೈಕೋರ್ಟ್ ಪ್ರಶ್ನೆ ಕೇಳಿದ್ರೆ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಎಜಿ ವಿವರಣೆ ಕೊಡಲಿದ್ದಾರೆ.