ತಮಿಳುನಾಡಿಗೆ ನಿರಂತರ ಕಾವೇರಿ ನೀರು : KRS ನೀರಿನ ಮಟ್ಟ ಕುಸಿತ

ಶುಕ್ರವಾರ, 1 ಸೆಪ್ಟಂಬರ್ 2023 (09:20 IST)
ಮಂಡ್ಯ : ರಾಜ್ಯದಲ್ಲಿ ಮಳೆಯ ಕೊರತೆಯಾಗಿದೆ. ಆದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನ ಕರ್ನಾಟಕ ಚಾಚೂತಪ್ಪದೇ ಪಾಲನೆ ಮಾಡುತ್ತಿದೆ.

ಕಳೆದ ಮೂರು ದಿನಗಳಿಂದ ನಿತ್ಯ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು ಹರಿಯುತ್ತಿದೆ. ಪರಿಣಾಮ ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಕುಸಿಯುತ್ತಿದ್ದು, 100 ಅಡಿಗೆ ಬಂದು ನಿಂತಿದೆ. ಇದು ಹಳೇ ಮೈಸೂರು ಭಾಗದ ಜನತೆಯ ಆತಂಕಕ್ಕೆ ಕಾರಣವಾಗಿದೆ.

ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಬೆಳೆಗಳಿಗೆ ಮಾತ್ರವಲ್ಲ. ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಮಂದಿಗೆ ಕುಡಿಯುವ ನೀರಿಗೂ ಸಮಸ್ಯೆಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ