ರೈತರಿಗೆ ನಿರಂತರ ವಿದ್ಯುತ್ ಪೂರೈಕೆ ನಮ್ಮ ಸರ್ಕಾರದ ಗುರಿ : ಸುನಿಲ್ ಕುಮಾರ್
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಲ್ಲಾ ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಧಾನ ಮಂತ್ರಿ ಕುಸುಮ್ ಸಿ ಯೋಜನೆ ಜಾರಿಗೆ ತರಲಾಗಿದೆ.
ಈ ಯೋಜನೆ ಮೂಲಕ ಹಸಿರು ವಿದ್ಯುತ್ ಉತ್ಪಾದನೆ ಕಡೆ ಹೊರಟಿದ್ದೇವೆ. ಸೋಲಾರ್ ಫೀಡರ್ ಗಳಿಂದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸಲಾಗುತ್ತದೆ. ಇದಕ್ಕೆ ಟೆಂಡರ್ ಕರೆಯಲಾಗಿದೆ ಎಂದರು.
ನಮ್ಮ ಸರ್ಕಾರದ ಆದ್ಯತೆ ರೈತರಿಗೆ 7 ಗಂಟೆ ನಿರಂತರ ಗುಣಮಟ್ಟದ ವಿದ್ಯುತ್ ಪೂರೈಕೆ ಗುರಿ ಇದೆ. ಕೆಲವೆಡೆ ಲೋಪವಾಗಿದೆ ಅದನ್ನೂ ಸರಿಪಡಿಸಲಾಗುತ್ತದೆ ಎಂದರು.