ವಿಯೆಟ್ನಾಂನಿಂದ ಆಮದು ಮಾಡಿಕೊಂಡ ಹಣ್ಣುಗಳಲ್ಲಿ ಕೊರೊನಾವೈರಸ್ ಕುರುಹುಗಳು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಚೀನಾದ ಅಧಿಕಾರಿಗಳು ಆಮದು ಮಾಡಿಕೊಂಡ ಆಹಾರ ಉತ್ಪನ್ನಗಳ ತುರ್ತು ತಪಾಸಣೆಯನ್ನು ಪ್ರಾರಂಭಿಸಿದ್ದಾರೆ. ಹಣ್ಣು ಖರೀದಿದಾರರು ಎಚ್ಚರ ವಹಿಸಲು ಆದೇಶಿಸಿದ್ದಾರೆ.
ಆದರೆ ಆಹಾರದಿಂದ ಕೊರೊನಾವೈರಸ್ ಹರಡಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಿದ್ದರೂ ಚೀನಾದ ಆರೋಗ್ಯ ಅಧಿಕಾರಿಗಳು ಚೀನಾ ದೇಶವು ವೈರಸ್ ಅಲೆಯೊಂದಿಗೆ ಹೋರಾಡುತ್ತಿರುವುದರಿಂದ ಹೆಚ್ಚು ಎಚ್ಚರ ವಹಿಸಿದ್ದಾರೆ.
ಮುಂದಿನ ತಿಂಗಳು ಚಳಿಗಾಲದ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸಲು ಚೀನಾ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾವೈರಸ್ ಅನ್ನು ಎದುರಿಸಲು ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾರೆ. ಕೊವಿಡ್ ಪ್ರಕರಣಗಳ ಉಲ್ಬಣದ ಮಧ್ಯೆ ಚೀನಾದಲ್ಲಿ ಲಾಕ್‌ಡೌನ್ ಮಾಡಲಾಗಿದೆ.