ಮುಂಬೈ : ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ ಬೆನ್ನಲೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ತೆರೆದ ಪ್ರದೇಶಗಳನ್ನು ಹೊರತುಪಡಿಸಿ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಆದೇಶದಲ್ಲಿ ರೈಲುಗಳು, ಬಸ್ಗಳು, ಚಿತ್ರಮಂದಿರಗಳು, ಸಭಾಂಗಣಗಳು, ಕಚೇರಿಗಳು, ಆಸ್ಪತ್ರೆಗಳು, ಕಾಲೇಜುಗಳು, ಶಾಲೆಗಳಂತಹ ಮುಚ್ಚಿದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಪ್ರದೀಪ್ ವ್ಯಾಸ್ ತಮ್ಮ ಆದೇಶದಲ್ಲಿ ಹೇಳಿದರು.
ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿತ್ತು. ಆದರೆ ಈ ನಡುವೆ ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಏರಿಕೆ ಕಾಣುತ್ತಿದೆ.
ಮೂರು ತಿಂಗಳ ಬಳಿಕ ಮೊದಲ ಬಾರಿ ನಿತ್ಯ ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳ ವರದಿಯಾಗುತ್ತಿದೆ. ಮುಂಬೈ, ಪುಣೆ, ಥಾಣೆಯಂತಹ ಮಹಾ ನಗರಗಳಲ್ಲಿ ಸೋಂಕು ಹೆಚ್ಚುತ್ತಿದೆ ಎಂದು ಆದೇಶದಲ್ಲಿ ತಿಳಿಸಿದರು.