ವಿದೇಶದಿಂದ ಬೆಂಗಳೂರಿಗೆ ಆಗಮಿಸಿದವರಿಗೆ ಕೊರೊನಾ ದೃಢ

ಮಂಗಳವಾರ, 27 ಡಿಸೆಂಬರ್ 2022 (11:43 IST)
ಬೆಂಗಳೂರು : ಡಿಸೆಂಬರ್ ತಿಂಗಳಿನಲ್ಲಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯ 12 ಮಂದಿಯೂ ಆರೋಗ್ಯವಾಗಿದ್ದಾರೆ. ಒಟ್ಟು ನಾಲ್ಕು ಜನ ಅಂತರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಇನ್ನುಳಿದವರು ಹೋಂ ಐಸೋಲೇಷನ್ನಲ್ಲಿದ್ದಾರೆ.  

ಹಾಂಕಾಂಗ್, ಅಮೇರಿಕ, ಥಾಯ್ಲೆಂಡ್, ಆಸ್ಟ್ರೇಲಿಯಾ, ಸಿಂಗಾಪುರದಿಂದ ಬಂದ ಪ್ರಯಾಣಿಕರಲ್ಲಿ ಸೋಂಕು ಕಾಣಿಸಿದೆ. ಇವರಿಗೆ ಬಂದಿರುವ ತಳಿ  ಯಾವುದು ಎಂದು ತಿಳಿಯಲು ಗಂಟಲ ದ್ರವದ ಮಾದರಿಯನ್ನು ಜೀನೋಮ್ ಸೀಕ್ವೆನ್ಸ್ ಲ್ಯಾಬ್ಗೆ ಕಳುಹಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ