ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 25) ಹೊಸದಾಗಿ 290 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,39,647 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 10 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,017 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,583 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 137 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,844 ಕ್ಕೆ ಏರಿಕೆಯಾಗಿದೆ. 12,50,844 ಸೋಂಕಿತರ ಪೈಕಿ 12,28,172 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,250 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,421 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.