ಕರ್ನಾಟಕದಲ್ಲಿ ಹೊಸದಾಗಿ 332 ಜನರಿಗೆ ಕೊರೊನಾ ದೃಢ

ಮಂಗಳವಾರ, 12 ಅಕ್ಟೋಬರ್ 2021 (20:14 IST)
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 12) ಹೊಸದಾಗಿ 332 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,81,732 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,34,085 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 11 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,906 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,712 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 145 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,48,604 ಕ್ಕೆ ಏರಿಕೆಯಾಗಿದೆ. 12,48,604 ಸೋಂಕಿತರ ಪೈಕಿ 12,25,810 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,198 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,595 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ