ಬೆಂಗಳೂರು : ಅಂತಾರಾಷ್ಟ್ರೀಯ ಪ್ರಯಾಣಿಕರು ಕೊರೊನಾ ಪಾಸಿಟಿವ್ ಕಂಡುಬಂದಲ್ಲಿ ಕೂಡಲೇ ಅವರನ್ನು ಕ್ವಾರಂಟೈನ್ನಲ್ಲಿಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯವಸ್ಥೆ ಮಾಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ 19 ಜಾಗೃತಿ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಲ್ಲಿ ಕೊರೊನಾ ಸೋಂಕಿತರಿಗಾಗಿ ಬೆಂಗಳೂರಿನಲ್ಲಿ ಬೋರಿಂಗ್ ಹಾಸ್ಪಿಟಲ್ ಮತ್ತು ಮಂಗಳೂರಿನಲ್ಲಿ ವೆನ್ಲಕ್ ಹಾಸ್ಪಿಟಲ್ನಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿದ್ದು,
ಸೋಂಕಿನ ಲಕ್ಷಣಗಳು ಕಂಡುಬಂದ ಪ್ರಯಾಣಿಕರು ಸ್ಥಳೀಯ ಖಾಸಗಿ ಹೋಟೆಲ್ಗಳಲ್ಲಿ ಪ್ರತ್ಯೇಕವಾಗಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದೆ. ಅಷ್ಟೇ ಅಲ್ಲದೇ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದವರು ರಿಸಲ್ಟ್ ಬರಲು ತಡವಾಗಿದ್ದಲ್ಲಿ ತಮ್ಮ ಮನೆಗಳಲ್ಲಿಯೇ ಪ್ರತ್ಯೇಕವಾಗಿ ಉಳಿದುಕೊಳ್ಳಲು ಸೂಚನೆ ನೀಡಿದೆ.
ಸಾಮಾಜಿಕ ಸಭೆ ಸಮಾರಂಭ ಮತ್ತು ಕಾರ್ಯಕ್ರಮಗಳಲ್ಲಿ ಜನಸಂದಣಿ ಕಡಿಮೆ ಮಾಡಲು ಹಲವು ಕಡೆಗಳಲ್ಲಿ ಆಗಮನ ಮತ್ತು ನಿರ್ಗಮನ ಕೇಂದ್ರಗಳ ಸ್ಥಾಪನೆಗೆ ಸೂಚಿಸಿದೆ.