ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 562 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ.
ಇನ್ನೊಂದೆಡೆ ಬೆಂಗಳೂರು ನಗರದಲ್ಲಿ ಪಾಸಿಟಿವ್ ಕೇಸ್ಗಳ ಸಂಖ್ಯೆ ಐನೂರರ ಗಡಿ ದಾಟಿದೆ. ಇಂದು ಬೆಂಗಳೂರು ನಗರದಲ್ಲಿ 545 ಕೇಸ್ ದಾಖಲಾಗಿದೆ.
ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,263ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಲ್ಲಿ ದಾಖಲಾದ 4 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ.
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,387ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.07 ಏರಿಕೆ ಕಂಡಿದೆ.
ಬೆಂಗಳೂರು ಹೊರತು ಪಡಿಸಿ ಉಳಿದಂತೆ 11 ಜಿಲ್ಲೆಗಳಲ್ಲಿ 17 ಕೇಸ್ ಮತ್ತು 18 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 352 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,066 ಮರಣ ಪ್ರಕರಣ ಪತ್ತೆಯಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 545, ಮೈಸೂರು 4, ದಕ್ಷಿಣಕನ್ನಡ 3, ಚಿತ್ರದುರ್ಗ 2, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾಸನ, ತುಮಕೂರು, ಉಡುಪಿ ಮತ್ತು ಉತ್ತರಕನ್ನಡದಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 562 ಕೇಸ್ ವರದಿಯಾಗಿದೆ.