ಮತ್ತೆ ದಿಢೀರ್ ಕೊರೊನಾ ಏರಿಕೆ !
ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,307ಕ್ಕೆ ಏರಿದೆ. ಇಂದು ಬೆಂಗಳೂರು ಗ್ರಾಮಾಂತರ, ಧಾರವಾಡ, ಹಾವೇರಿ ಮತ್ತು ಕೊಪ್ಪಳದಲ್ಲಿ ತಲಾ ಒಂದೊಂದು ಮರಣ ಪ್ರಕರಣ ದಾಖಲಾಗಿದೆ.
ಈವರೆಗೆ ಒಟ್ಟು 40,159 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,782 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಪಾಸಿಟಿವಿಟಿ ರೇಟ್ ಶೇ. 7.78ಕ್ಕೆ ತಲುಪಿದೆ.