ವೈದ್ಯಕೀಯ ಸೀಟುಗಳಿಗೆ ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲು ಸಾಧ್ಯವಿಲ್ಲ : ಸುಪ್ರೀಂ

ಶುಕ್ರವಾರ, 10 ಜೂನ್ 2022 (14:02 IST)
ನವದೆಹಲಿ : NEET-PG 2021ರ ಕೋಟಾದಲ್ಲಿ ಖಾಲಿ ಇರುವ ವೈದ್ಯಕೀಯ ಸೀಟುಗಳಿಗೆ ಹೊಸ ಸುತ್ತಿನ ಕೌನ್ಸೆಲಿಂಗ್ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
 
ಈಗ ಅವಕಾಶ ನೀಡುವುದು ವೈದ್ಯಕೀಯ ಶಿಕ್ಷಣ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

40,000 ಸ್ನಾತಕೋತ್ತರ ಸೀಟುಗಳು ಪೈಕಿ NEET-PG 2021ರ ಕೋಟಾದಲ್ಲಿ 1,456 ಸೀಟಗಳು ಖಾಲಿ ಉಳಿದಿದ್ದು ಇವುಗಳ ಭರ್ತಿಗೆ ವಿಶೇಷ ಕೌನ್ಸೆಲಿಂಗ್ ನಡೆಸಲು ಅನುಮತಿ ನೀಡಬೇಕು ಎಂದು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ನ್ಯಾ. ಎಂ.ಆರ್ ಶಾ ಮತ್ತು ನ್ಯಾ. ಅನಿರುದ್ಧ ಬೋಸ್ ಅವರ ಪೀಠ ವಿಚಾರಣೆ ನಡೆಸಿತ್ತು.  ಈ ಸಂಬಂಧ ಇಂದು ಆದೇಶ ನೀಡಿದ ಕೋರ್ಟ್, ಈಗಾಗಲೇ 8-9 ಸುತ್ತಿನ ಕೌನ್ಸೆಲಿಂಗ್ ನಡೆಸಲಾಗಿದ್ದು, ಹೊಸದಾಗಿ ಕೌನ್ಸೆಲಿಂಗ್ ನಡೆಸುವುದು ಸರಿಯಲ್ಲ.

ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ವೈದ್ಯಕೀಯ ಶಿಕ್ಷಣದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಈ ಅರ್ಜಿಯನ್ನು ವಜಾ ಮಾಡುತ್ತಿದ್ದೇವೆ ಎಂದು ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ