ಬೀಜಿಂಗ್ : ಚೀನಾದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಚೀನಾದ ಚೆಂಗ್ಡು ಮತ್ತು ತಿಯಾನ್ ಹಿನ್ ಪ್ರದೇಶಗಳಲ್ಲಿ ಲಾಕ್ಡೌನ್ ಮಾಡಲು ಅಲ್ಲಿನ ಸರ್ಕಾರ ನಿರ್ಧಾರವನ್ನು ಕೈಗೊಂಡಿದೆ.
ಚೀನಾದಲ್ಲಿ ಚೆಂಗ್ಡುವಿನ ಕೇಂದ್ರ ಜಿಂಜಿಯಾಂಗ್ ಜುಕ್ಕೆತಕ್ಕು ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕನ್ನು ತಡೆಗಟ್ಟಲು ಸರ್ಕಾರವು 6.5 ಕೋಟಿ ಜನರನ್ನು ಲಾಕ್ಡೌನ್ ಮಾಡುವ ನಿರ್ಧಾರವನ್ನು ಕೈಗೊಂಡಿದೆ.
ರಾಷ್ಟ್ರೀಯ ರಜಾ ದಿನಗಳಲ್ಲಿ ಅಂತಾರಾಜ್ಯ ಪ್ರಯಾಣದ ಮೇಲೂ ನಿರ್ಬಂಧ ಹೇರಲಾಗಿದೆ. 140 ಕೋಟಿ ಜನಸಂಖ್ಯೆ ಇರುವ ಚೀನಾ ದೇಶದಲ್ಲಿ 1,552 ಕೋವಿಡ್ ಪ್ರಕರಣಗಳು ವರದಿಯಾಗಿದೆ.