ಕೋವಿಡ್: ಓದಿಗೆ ಗುಡ್‌ಬೈ ಹೇಳಿದ ಮಕ್ಕಳು

ಶನಿವಾರ, 11 ಡಿಸೆಂಬರ್ 2021 (11:27 IST)
ಬೆಂಗಳೂರು : ಕೋವಿಡ್ ಹಾಗೂ ಲಾಕ್ ಡೌನ್ ಅವಧಿಯಲ್ಲಿ ಶಾಲೆಗಳು ಮುಚ್ಚಿದ್ದರಿಂದ ಶೇ.70 ರಷ್ಟುಮಕ್ಕಳು ಆನ್ಲೈನ್ ಸೇರಿದಂತೆ ಯಾವುದೇ ರೀತಿಯಲ್ಲೂ ಕಲಿಕೆಯಲ್ಲಿ ಪಾಲ್ಗೊಂಡಿಲ್ಲ.

ಕೃಷಿ ಮತ್ತಿತರ ಕೆಲಸದಲ್ಲಿ ತಮ್ಮನ್ನು ತೊಡಗಿಸಿದ್ದಾರೆ. ಬಹಳಷ್ಟು ಮಕ್ಕಳು ಓದು ಬರಹದಲ್ಲಿ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಇದು ಕರ್ನಾಟಕ ರಾಜ್ಯ ಮಕ್ಕಳ ನಿಗಾ ಕೇಂದ್ರ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಮಕ್ಕಳ ಪರಿಸ್ಥಿತಿ ಕುರಿತು ನಡೆಸಿದ ತೌಲನಿಕ ಅಧ್ಯಯನ ವರದಿಯಲ್ಲಿ ಕಂಡುಬಂದಿರುವ ಅಂಶಗಳು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಚ್.ಸಿ.ರಾಘವೇಂದ್ರ ಶುಕ್ರವಾರ ಈ ವರದಿಯನ್ನು ಬಿಡುಗಡೆ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ