ಚಿಕ್ಕಬಳ್ಳಾಪುರ : ನೆರೆಯ ಚೀನಾ ಸೇರಿ ವಿದೇಶಗಳಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟಿಸಲಾಗಿದೆ.
ಈ ವೇಳೆ ಬೆಂಗಳೂರು ಏರ್ಪೋರ್ಟ್ ಬರುವ ಪ್ರಯಾಣಿಕರಿಗೆ ಕೆಲವು ಮುನ್ನೆಚ್ಚರಿಕೆ ಮಾರ್ಗಸೂಚಿ ಕ್ರಮಗಳ ಬಿಡುಗಡೆ ಮಾಡಲಾಗಿದೆ.
ವಿಮಾನ ನಿಲ್ದಾಣಕ್ಕೆ ಬರುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ಶೇ. 2ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ ಕೋವಿಡ್ ಟೆಸ್ಟ್ (ಗಂಟಲು ದ್ರವ ನೀಡಿ ಏರ್ಪೋರ್ಟ್ನಿಂದ ಹೊರಗೆ ಬರತಕ್ಕದ್ದು) ಮಾಡಲಾಗಿದೆ.
ರೋಗ ಲಕ್ಷಣಗಳು ಕಂಡುಬರುವ ಪ್ರಯಾಣಿಕರು ತತ್ಕ್ಷಣ ಐಸೋಲೇಷನ್ ಆಗಬೇಕು. 12 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಅಲ್ಲ. ರೋಗ ಗುಣ ಲಕ್ಷಣಗಳು ಇದ್ದರೆ ಮಾತ್ರ ಟೆಸ್ಟಿಂಗ್ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರು ಸ್ವಯಂ ನಿಗಾವಹಿಸಲು ಸೂಚಿಸಲಾಗಿದೆ.