ಕರುಣಾನಿಧಿ ನಿಧನಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರ ಟ್ವೀಟ್
ತಮಿಳುನಾಡು ಮೂಲದ ರವಿಚಂದ್ರನ್ ಅಶ್ವಿನ್, ಮುರಳಿ ವಿಜಯ್, ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವೀಟ್ ಮೂಲಕ ಕರುಣಾನಿಧಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನರಿಗಾಗಿ ಕೆಲಸ ಮಾಡಿದ ಅತ್ಯುನ್ನತ ನಾಯಕನನ್ನು ಕಳೆದುಕೊಂಡಿದ್ದೇವೆ ಎಂದು ಮರಳಿ ವಿಜಯ್ ಟ್ವೀಟ್ ಮಾಡಿದ್ದಾರೆ. ಅಶ್ವಿನ್ ಕೂಡಾ ಟ್ವೀಟ್ ಮಾಡಿದ್ದು, ಕರುಣಾನಿಧಿ ಸಾವಿನ ಸುದ್ದಿ ಕೇಳಿ ಬೇಸರವಾಗಿದೆ. ಅವರ ಕುಟುಂಬಕ್ಕೆ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ. ಇನ್ನು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕೂಡಾ ಇದೇ ರೀತಿ ಸಂತಾಪ ವ್ಯಕ್ತಪಡಿಸಿದ್ದಾರೆ.