ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟವ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ನಿನ್ನೆ 566 ಹೊಸ ಪ್ರಕರಣ ಪತ್ತೆಯಾಗಿತ್ತು.
ಇಂದು ಒಟ್ಟು 707 ಕೇಸ್ ಮತ್ತು 3 ಮರಣ ಪ್ರಕರಣ ದಾಖಲಾಗಿದೆ. ಜೊತೆಗೆ ಓಮಿಕ್ರಾನ್ ಒಟ್ಟು ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆ ಕಂಡು ಆತಂಕ ಮೂಡಿಸಿದೆ.
ಬೆಂಗಳೂರಿನಲ್ಲಿ ಕೊರೊನಾ ಸ್ಫೋಟಗೊಂಡಿದ್ದು, 565 ಮಂದಿಗೆ ಇಂದು ಕೊರೊನಾ ಬಂದಿದೆ. ಜೊತೆಗೆ ರಾಜ್ಯದಲ್ಲಿ ದಾಖಲಾದ ಮೂರು ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 252 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8,223ಕ್ಕೆ ಏರಿಕೆ ಕಂಡಿದೆ.
ಈವರೆಗೆ ರಾಜ್ಯದಲ್ಲಿ ಒಟ್ಟು 30,06,505 ಮಂದಿಗೆ ಕೊರೊನಾ ಬಂದಿದೆ. 39,59,926 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.42 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.61 ರಷ್ಟಿದೆ.
ರಾಜ್ಯದಲ್ಲಿ ಇಂದು ಒಟ್ಟು 1,63,161 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,14,686 ಸ್ಯಾಂಪಲ್ (ಆರ್ಟಿಪಿಸಿಆರ್ 92,405 + 22,281 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.