ಇಂದಿನಿಂದ ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದ್ದು, ಎಲ್ಲ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ಸಹ ನೀಡಲಾಗಿದೆ.
ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಮೊದಲು ತಮಿಳುನಾಡಿನ ರಾಜಧಾನಿ ಚೆನ್ನೈ ಎದುರಿಸಲಿದೆ. ನಂತರ ಕರ್ನಾಟಕದ ಮೈಸೂರು ಭಾಗ ಸಹ ಸೈಕ್ಲೋನ್ ಗೆ ಒಳಪಡಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗಲಿದೆ ಎಂದು ಹಮಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಹಾಸನ. ದಾವಣಗೆರೆ, ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಚಳಿ ಸಹ ರಾಜ್ಯದಲ್ಲಿ ಆರಂಭವಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಚಳಿ ಮತ್ತು ಸುಳಿ ಗಾಳಿಯ ಜೊತೆ ಒಣ ಹವೆ ಇರಲಿದೆ.