ಚಂಡಮಾರುತ : ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಶನಿವಾರ, 10 ಡಿಸೆಂಬರ್ 2022 (08:07 IST)
ಬೆಂಗಳೂರು : ಸಿಲಿಕಾನ್ ಸಿಟಿ ಈಗ ಕೂಲ್ ಕೂಲ್ ಆಗಿದೆ. ರಾಜಧಾನಿ ಸೇರಿದಂತೆ ಇಡೀ ರಾಜ್ಯ ಚಳಿಗಾಳಿಗೆ ತತ್ತರಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಸಂಜೆಯ ಹೊತ್ತಿಗೆ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, 5 ದಿನ ಚಳಿಯೊಂದಿಗೆ ಮೋಡ ಕವಿದ ವಾತಾವರಣವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಮಾಂಡಸ್ ಚಂಡಮಾರುತ ಕರ್ನಾಟಕ ಮೂಲಕ ಅರಬ್ಬೀ ಸಮುದ್ರದ ಕಡೆ ಹೋಗಲಿದೆ. ಈ ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಿಗೆ ಉಂಟಾಗಲಿದೆ. ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಮಳೆ, ಚಳಿ ಮುಂದುವರಿಯುವ ಬಗ್ಗೆ ಮುನ್ಸೂಚನೆ ನೀಡಿದೆ. 

ಇನ್ನೂ ತಮಿಳುನಾಡಿನಲ್ಲಿ ಮಾಂಡಸ್ ಅಬ್ಬರ ಹೆಚ್ಚಾಗಿದ್ದು, ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟಲಿದೆ. ಇಂದು ಮತ್ತು ನಾಳೆ ಕರಾವಳಿಯ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ 6 ಎಂಎಂ ಮಳೆಯಾಗುವ ಸಾಧ್ಯತೆಯಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ