ಹಲವೆಡೆ ಡಿ. 4ರವರೆಗೆ ವ್ಯಾಪಕ ಮಳೆ!

ಬುಧವಾರ, 1 ಡಿಸೆಂಬರ್ 2021 (09:08 IST)
ಇಂದಿನಿಂದ 4 ದಿನ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಇಂದಿನಿಂದ ಡಿ. 4ರವರೆಗೆ ಮಳೆಯಾಗಲಿದೆ.
ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಡಿ.2ರಂದು ಹೊರತುಪಡಿಸಿ ಉಳಿದ ದಿನಗಳಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ನಿನ್ನೆ ಸಂಜೆಯಿಂದ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಂಗಳೂರು, ಪುತ್ತೂರು, ಬಂಟ್ವಾಳ, ಸುಳ್ಯ, ವಿಟ್ಲ ಸುತ್ತಮುತ್ತಲೂ ಮಳೆ ಹೆಚ್ಚಾಗಿದೆ. ಕರಾವಳಿ ತೀರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಕನ್ಯಾಕುಮಾರಿ ಮತ್ತು ತಿರುನಲ್ವೇಲಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ