ಕೇಂದ್ರ ಆರೋಗ್ಯ ಸಚಿವರಿಗೆ ವೈದ್ಯಾಧಿಕಾರಿಗಳ ಡಿಮಾಂಡ್?

ಮಂಗಳವಾರ, 27 ಡಿಸೆಂಬರ್ 2022 (11:19 IST)
ಕೋವಿಡ್ ಮತ್ತೆ ಭಾರತಕ್ಕೆ ಪ್ರವೇಶಿಸಿದರೆ ಅದರ ಹರಡುವಿಕೆಯನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಚರ್ಚೆಯ ವೇಳೆ ವೈದ್ಯಾಧಿಕಾರಿಗಳು ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ತಡೆಗಟ್ಟಲು ಕೋವಿಡ್-19 ಲಸಿಕೆಯ 2ನೇ ಬೂಸ್ಟರ್ ಡೋಸ್ಗೆ ಅನುಮತಿ ನೀಡುವಂತೆ ಮನ್ಸುಖ್ ಮಾಂಡವಿಯಾ ಅವರನ್ನು ಕೇಳಿಕೊಂಡಿದ್ದಾರೆ. 

ವರದಿಗಳ ಪ್ರಕಾರ, ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ಅನ್ನು ನೀಡಲು 1 ವರ್ಷದ ಹಿಂದೆ ಪ್ರಾರಂಭಿಸಲಾಯಿತು. ಸಮಯ ಕಳೆದಂತೆ ಲಸಿಕೆಯ ಪ್ರತಿರಕ್ಷೆ ಕ್ಷೀಣಿಸುವುದರಿಂದ ಅಪಾಯದಲ್ಲಿರುವ ಜನರಿಗೆ, ವಿಶೇಷ ವೈದ್ಯರಿಗೆ, ನರ್ಸ್ಗಳಿಗೆ, ಇತರ ಆಸ್ಪತ್ರೆ ಸಿಬ್ಬಂದಿಗೆ 4ನೇ ಮುನ್ನೆಚ್ಚರಿಕಾ ಲಸಿಕೆಯನ್ನು ಪಡೆಯಲು ಅನುಮತಿ ನೀಡುವಂತೆ ಸಚಿವರನ್ನು ಕೇಳಲಾಗಿದೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ