ಭಾರತದಲ್ಲಿ ಮಧುಮೇಹ, ರಕ್ತದೊತ್ತಡ ಹೆಚ್ಚಳ : ಸುಧಾಕರ್

ಸೋಮವಾರ, 22 ಆಗಸ್ಟ್ 2022 (09:23 IST)
ಚಿಕ್ಕಬಳ್ಳಾಪುರ : ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಗೆ ಇಡೀ ವಿಶ್ವಕ್ಕೆ ಭಾರತ ರಾಜಧಾನಿಯಾಗುತ್ತಿದೆ.
 
ಇದಕ್ಕೆ ಕಾರಣಗಳನ್ನು ಹುಡುಕುವ ಸಂಶೋಧನೆಗಳು ಹೆಚ್ಚಾಗುವ ಜೊತೆಗೆ ಪರಿಹಾರಗಳನ್ನು ಕಂಡುಹಿಡಿಯುವ ಕೆಲಸ ಸಂಸ್ಥೆಗಳಿಂದ ಆಗಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.

ತಾಲೂಕಿನ ಮೋಟ್ಲೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಒನ್ ಹೆಲ್ತ್ ಟ್ರಸ್ಟ್ ನೂತನ ಕ್ಯಾಂಪಸ್ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಟಿಬಿ, ಮಲೇರಿಯಾ ಮುಂತಾದ ಹಲವಾರು ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಒನ್ ಹೆಲ್ತ್ ಟ್ರಸ್ಟ್ ನಡೆಸುತ್ತಿರುವ ಸಂಶೋಧನೆ ಶ್ಲಾಘನೀಯ ಎಂದರು.

ಸೇವಿಸುವ ಆಹಾರದಿಂದ ಆರೋಗ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಮತ್ತು ಆಹಾರದಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಸಂಶೋಧನೆಗಳು ನಡೆಯಬೇಕಿದೆ.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ನಂತಹ ಕಾಯಿಲೆಗಳು ಅಧಿಕವಾಗುತ್ತಿರುವುದರ ಹಿಂದೆ ಇರುವ ಸಮಸ್ಯೆಗಳನ್ನು ಕಂಡುಹಿಡಿದು, ಅದಕ್ಕೆ ಪರಿಹಾರ ಸೂಚಿಸುವ ಮೂಲಕ ಜನರ ಆರೋಗ್ಯಕರ ಜೀವನಕ್ಕೆ ಸಂಸ್ಥೆ ಪೂರಕವಾಗಿ ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ