ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್

ಸೋಮವಾರ, 31 ಜುಲೈ 2023 (13:02 IST)
ಬೆಂಗಳೂರು : ಬುಧವಾರದಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್ ಮಾಡಲು ರಾಜ್ಯ ಡಯಾಲಿಸಿಸ್ ನೌಕರರ ಸಂಘ ನಿರ್ಧರಿಸಿದೆ. ಇದರಿಂದಾಗಿ ಡಯಾಲಿಸಿಸ್ ರೋಗಿಗಳಿಗೆ ಆಪತ್ತು ಉಂಟಾಗುವ ಆತಂಕ ಶುರುವಾಗಿದೆ.

ಕಳೆದ ಎರಡು ವರ್ಷಗಳಿಂದ ಸರಿಯಾದ ವೇತನ ನೀಡದಿರುವುದು ಹಾಗೂ ಕೆಲ ಸೌಲಭ್ಯಗಳನ್ನು ನೀಡದ ಹಿನ್ನೆಲೆ, ರಾಜ್ಯಾದ್ಯಂತ ಡಯಾಲಿಸಿಸ್ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಮಾಡಲು ನಿರ್ಧಾರ ಮಾಡಿದ್ದಾರೆ.

ರಾಜ್ಯದ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಒಟ್ಟು 167 ಡಯಾಲಿಸಿಸ್ ಕೇಂದ್ರಗಳಿದ್ದು, 1 ಸಾವಿರಕ್ಕೂ ಅಧಿಕ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೊರ ಗುತ್ತಿಗೆ ಆಧಾರದ ಮೇಲೆ ಡಯಾಲಿಸಿಸ್ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ