ಜರ್ಮನಿಗೆ ಹೋಗಿ ಐಸಿಸ್ ಉಗ್ರರನ್ನು ಸರ್ಮಥಿಸಿದರೇ ರಾಹುಲ್ ಗಾಂಧಿ?!
ಅಭಿವೃದ್ಧಿ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ರಾಹುಲ್ ಐಸಿಸ್ ಉಗ್ರ ಸಂಘಟನೆಯನ್ನು ಸಮರ್ಥಿಸಿದರು ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ರಾಹುಲ್ ಕ್ಷಮೆ ಯಾಚಿಸಬೇಕು ಎಂದೂ ಬಿಜೆಪಿ ಆಗ್ರಹಿಸಿದೆ.
ಅಭಿವೃದ್ಧಿ ಕೆಲಸಗಳಿಂದ ಬಹುದೊಡ್ಡ ಪ್ರಮಾಣದ ಜನರನ್ನು ದೂರವಿಡುವುದರಿಂದ ಐಸಿಸ್ ನಂತಹ ಉಗ್ರ ಸಂಘಟನೆಗಳು ಹುಟ್ಟಿಕೊಳ್ಳುತ್ತವೆ ಎಂದು ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಈ ಆರೋಪ ಮಾಡಿದೆ. ಅಷ್ಟೇ ಅಲ್ಲದೆ, ಭಾರತದಲ್ಲಿ ಮಹಿಳೆಯರು ಸುರಕ್ಷಿತರಾಗಿಲ್ಲ ಎನ್ನುವ ಮೂಲಕ ರಾಹುಲ್ ಗಾಂಧಿ ವಿದೇಶದಲ್ಲಿ ಭಾರತದ ಮಾನ ಕಳೆದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.