ಈಸ್ಟರ್ ಕ್ರೈಸ್ತಧರ್ಮೀಯರ ಹಬ್ಬ. ಈಸ್ಟರ್ ಕ್ರೈಸ್ತ ಮತೀಯರ ಮುಖ್ಯ ಹಬ್ಬ. ಕ್ರಿಸ್ತನ ಪುನರುತ್ಥಾನದ ವಾರ್ಷಿಕ ಸ್ಮರಣೆಗಾಗಿ ಇದನ್ನು ಆಚರಿಸುತ್ತಾರೆ. ಹಬ್ಬ ಸಾಮಾನ್ಯವಾಗಿ ಪ್ರತಿ ವರ್ಷ ಮಾರ್ಚ 22ರಿಂದ ಏಪ್ರಿಲ್ 25ರ ಒಳಗೆ ಬರುತ್ತದೆ. ಹಬ್ಬಕ್ಕೆ ಮುನ್ನ 40 ದಿನಗಳು ಉಪವಾಸ ಮಾಡುತ್ತಾರೆ. ಶುಭ ಶುಕ್ರವಾರದ ಅನಂತರ ಬರುವ ಭಾನುವಾರವೇ ಈಸ್ಟರ್ ಹಬ್ಬ. ಆ ದಿನ ಮೇಣದಬತ್ತಿಗಳನ್ನು ಹಚ್ಚಿ, ಸಂತೋಷದಿಂದ ನಲಿಯುತ್ತಾರೆ. ವಿವಿಧ ರೀತಿಯಲ್ಲಿ ಅಲಂಕರಣಗೊಂಡ ಮೊಟ್ಟೆಗಳನ್ನು ಪರಸ್ಪರ ವಿನಿಮಯ ಮಾಡುವುದು ಒಂದು ರೂಢಿ.