ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಎಚ್ ಡಿ ದೇವೇಗೌಡರ ಮನೆಯಲ್ಲಿ ಖಾತೆ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು.
ಆದರೆ ಈ ಸಂದರ್ಭದಲ್ಲಿ ಪ್ರಮುಖ ಖಾತೆಗಳನ್ನು ಅದರಲ್ಲೂ ವಿಶೇಷವಾಗಿ ತಾವು ಕಳೆದ ಬಾರಿ ನಿಭಾಯಿಸಿದ್ದ ಇಂಧನ ಖಾತೆಯನ್ನೇ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಶಾಸಕ, ಡಿಕೆ ಶಿವಕುಮಾರ್ ಸಿಟ್ಟಾಗಿದ್ದಾರೆ.
ದೇವೇಗೌಡರ ಜತೆ ಮಾತುಕತೆ ನಡೆಸುವಾಗ ಇಂಧನ ಖಾತೆಗೆ ಲಾಭಿ ನಡೆಸದೇ ಇರುವುದಕ್ಕೆ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಖಾತೆ ಹಂಚಿಕೆ ವಿಚಾರವಾಗಿ ಮಾತುಕತೆ ನಡೆಸುವಾಗ ತಮ್ಮ್ನನು ಪರಿಗಣಿಸದೇ ಇರುವುದಕ್ಕೂ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ ಇಂದು ಸಂಜೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ವಿದೇಶದಿಂದ ದೆಹಲಿಗೆ ವಾಪಸಾಗಲಿದ್ದು, ಅವರು ಬಂದ ಮೇಲೆ ಲಿಸ್ಟ್ ಫೈನಲ್ ಆಗಲಿದೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಈ ಸಂಬಂಧ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.