ಖಾತೆ ಹಂಚಿಕೆಯಲ್ಲಿ ಅಸಮಾಧಾನವಿಲ್ಲ: ಪರಮೇಶ್ವರ್
ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್ ಕಾಂಗ್ರೆಸ್ ನೊಳಗೆ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ.
ಸಚಿವ ಸ್ಥಾನಗಳ ಹಂಚಿಕೆ ಮಾತ್ರವಲ್ಲದೆ, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರದಲ್ಲೂ ಯಾವುದೇ ಅಸಮಾಧಾನಗಳಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿದ್ದಾರೆ. ಇಂದು ಸಂಜೆ ಖಾತೆ ಹಂಚಿಕೆ ಬಗ್ಗೆ ಹೈಕಮಾಂಡ್ ನಿಂದ ಅಂತಿಮ ನಿರ್ಧಾರ ಬರುವ ಸಾಧ್ಯತೆಯಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.