ಗಾಂಧಿನಗರ : ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಗುಜರಾತ್ನ ಸರ್ದಾರ್ ವಲ್ಲಬಾಯಿ ಪಟೇಲ್ರ ಏಕತಾ ಮೂರ್ತಿಯ ಬಳಿ ಭೂಕಂಪನ ಉಂಟಾದ ಘಟನೆ ನಡೆದಿದೆ.
ಗುಜರಾತ್ನ ನರ್ಮದಾ ಜಿಲ್ಲೆಯ ಕೆವಾಡಿಯಾ ಗ್ರಾಮದ ಬಳಿ 3.1 ತೀವ್ರತೆಯ ಕಂಪನ ದಾಖಲಾಗಿದೆ. ಆದರೆ ಯಾವುದೇ ಸಾವು ನೋವು ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ. 182 ಮೀ. ಎತ್ತರದ ಪ್ರತಿಮೆಯು ಈ ಕೆವಾಡಿಯಾ ಗ್ರಾಮದ ಬಳಿ ಇದೆ.
ಆದರೆ ಪ್ರಬಲ ಭೂಕಂಪಗಳು ಮತ್ತು ಚಂಡಮಾರುತಗಳನ್ನು ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಲಾದ ಏಕತೆಯ ಪ್ರತಿಮೆಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಮಾರಕದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಹುಲ್ ಪಟೇಲ್ ಹೇಳಿದರು.