ಶಿಕ್ಷಣ ಇಲಾಖೆ ಮಾರ್ಗಸೂಚಿ ಜಾರಿಗೆ ಚಿಂತನೆ

ಮಂಗಳವಾರ, 27 ಡಿಸೆಂಬರ್ 2022 (09:34 IST)
ಶಾಲಾ-ಕಾಲೇಜುಗಳ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಲು ಕ್ರಮವಹಿಸಬೇಕು. ಅಲ್ಲದೆ ಕಡ್ಡಾಯವಾಗಿ ಸ್ಯಾನಿಟೈಸರ್ ಬಳಕೆ ಕೂಡ ಮಾಡಬೇಕು.

ಶಾಲಾ-ಕಾಲೇಜುಗಳ ಆವರಣಕ್ಕೆ ಸಾರ್ವಜನಿಕರು, ಪೋಷಕರಿಗೆ ನಿಷೇಧ ಹಾಕಬೇಕು. ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿರಬೇಕು. ಜೊತೆಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು.

ಅಡುಗೆ ಸಿಬ್ಬಂದಿ, ಸಹಾಯಕರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಹಾಕಿಸಿರಬೇಕು. ಜೊತೆಗೆ ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕು. ಬಿಸಿಯೂಟ ಮಾಡುವಾಗ ಅಡುಗೆ ಸಿಬ್ಬಂದಿ ಶುಚಿತ್ವ ಕಾಪಾಡಲು ಕ್ರಮವಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಬರೋವಾಗ, ಹೋಗುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. 

ಪ್ರಾರ್ಥನೆ, ಊಟದ ಸಮಯ, ತರಗತಿ ಒಳಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. ಆರೋಗ್ಯ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರ ವರ್ಗಗಳಿಗೆ ಶಾಲಾ-ಕಾಲೇಜುಗಳಿಗೆ ಬರಲು ಅವಕಾಶ ಕೊಡಬಾರದು. ಶಾಲಾ-ಕಾಲೇಜುಗಳ ಸೋಂಕು ಕಂಡು ಬಂದರೆ ತರಗತಿಯ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ