ಚುನಾವಣೆ : ರಾಜ್ಯ ಸಂಪುಟ ವಿಸ್ತರಣೆ
ಹಾಗೆಯೇ ನಿಶ್ಚಿಂತೆಯಿಂದ ಆಡಳಿತ ನಡೆಸಿಕೊಂಡು ಹೋಗುವುದರ ಜತೆಗೆ ಉತ್ತಮ ಬಜೆಟ್ ಮಂಡಿಸುವಂತೆ ಸಿಎಂಗೆ ವರಿಷ್ಠರು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ದಿಲ್ಲಿ ಪ್ರವಾಸ ಕೈಗೊಂಡಿದ್ದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆ ವಿಚಾರವಾಗಿಯೂ ಚರ್ಚಿಸಿದ್ದರು. ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದರು.
ಅದರಂತೆ ನೇರವಾಗಿ ನಡ್ಡಾ ಭೇಟಿ ಸಾಧ್ಯವಾಗದಿದ್ದರೂ ಫೋನ್ ಮೂಲಕ ಸಿಎಂ ಮಾತನಾಡಿದ್ದರು. ಒಂದೆರಡು ದಿನದಲ್ಲಿ ಮತ್ತೆ ಮಾತನಾಡುವುದಾಗಿ ಸಿಎಂಗೆ ನಡ್ಡಾ ಹೇಳಿದ್ದರು.