KERC ದರ ಏರಿಸಿದ್ದಕ್ಕೆ ವಿದ್ಯುತ್ ಬಿಲ್ ಹೆಚ್ಚಾಗಿದೆ : ಬೆಸ್ಕಾಂ

ಸೋಮವಾರ, 12 ಜೂನ್ 2023 (07:16 IST)
ಬೆಂಗಳೂರು : ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಕಳೆದ ಮೇ 12 ರಂದು ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಬೆಸ್ಕಾಂ ಜೂನ್ ತಿಂಗಳಲ್ಲಿ ನೀಡುವ ಮೇ ತಿಂಗಳ ವಿದ್ಯುತ್ ಬಳಕೆಯ ಬಿಲ್ ನಲ್ಲಿ ಪರಿಷ್ಕೃತ ವಿದ್ಯುತ್ ಶುಲ್ಕವನ್ನು ನಮೂದಿಸಿದೆ.

ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್ ನಿಂದ ಪೂರ್ವನ್ವಯವಾಗುವುದರಿಂದ ಬಿಲ್ ನಲ್ಲಿ ಏಪ್ರಿಲ್ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಕೆಇಆರ್ ಸಿ ಆದೇಶದ ಪ್ರಕಾರ ಎರಡು ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ.

ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್ಗೆ ಪ್ರತಿ ಯೂನಿಟ್ ದರ 4.75 ರೂ. ವಿಧಿಸಲಾಗಿದೆ. 100 ಯೂನಿಟ್ ಮೀರಿದರೆ ಬಳಸಿದ ಅಷ್ಟೂ ಯೂನಿಟ್ ಗೆ ಎರಡನೇ ಶ್ರೇಣಿ ದರ ಪ್ರತಿ ಯೂನಿಟ್ ಗೆ 7 ರೂ. ಅನ್ವಯವಾಗಲಿದೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಬೆಸ್ಕಾಂ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ